ರೋಮಾಪುರದವರಿಗೆ 7:4

ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 7

2ಗಂಡನಿರುವ ಸ್ತ್ರೀಯು ಅವನು ಬದುಕಿರುವ ತನಕ ನ್ಯಾಯಪ್ರಮಾಣದಿಂದ ಅವನಿಗೆ ಕಟ್ಟಲ್ಪಟ್ಟಿದ್ದಾಳೆ; ಗಂಡನು ಸತ್ತರೆ ಆಕೆಯು ಅವನ ನ್ಯಾಯಪ್ರಮಾಣದಿಂದ ಬಿಡುಗಡೆಯಾಗಿ ದ್ದಾಳೆ.

3ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಮದುವೆ ಮಾಡಿಕೊಂಡರೆ ವ್ಯಭಿ ಚಾರಿಣಿ ಎಂದು ಕರೆಯಲ್ಪಡುವಳು; ಗಂಡನು ಸತ್ತರೆ ಆ ನ್ಯಾಯಪ್ರಮಾಣದಿಂದ ಆಕೆಯು ಬಿಡುಗಡೆಯಾಗಿ ದ್ದಾಳೆ. ಹೀಗೆ ಆಕೆ ಮತ್ತೊಬ್ಬನನ್ನು ಮದುವೆ ಮಾಡಿ ಕೊಂಡರೂ ವ್ಯಭಿಚಾರಿಣಿಯಲ್ಲ.

4ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.

5ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು.

6ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ.

ರೋಮಾಪುರದವರಿಗೆ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी