ಆದಿಕಾಂಡ 39:21

ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 39

19ನಿನ್ನ ಸೇವಕನು ಹೀಗೆ ನನಗೆ ಮಾಡಿದನೆಂಬದಾಗಿ ತನ್ನ ಹೆಂಡತಿ ಹೇಳಿದ್ದನ್ನು ಕೇಳಿ ಅವನ ಕೋಪವು ಉರಿಯಿತು.

20ಆಗ ಯೋಸೇಫನ ಯಜಮಾನನು ಅವನನ್ನು ಹಿಡುಕೊಂಡು ರಾಜನ ಕೈದಿಗಳು ಬಂಧಿಸಲ್ಪಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.

21ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.

22ಆದದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅವರು ಅಲ್ಲಿ ಮಾಡ ಬೇಕಾದವುಗಳೆನ್ನೆಲ್ಲಾ ಅವನೇ ಮಾಡಿಸುವವನಾ ದನು.

23ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.

ಆದಿಕಾಂಡ 39 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी