೨ ಅರಸುಗಳು 1:4

ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಆಗ ಎಲೀಯನು ಹೊರಟುಹೋದನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 1

2ಇದಲ್ಲದೆ ಅಹಜ್ಯನು ಸಮಾರ್ಯ ದಲ್ಲಿರುವ ತನ್ನ ಮೇಲು ಮಾಳಿಗೆಯ ಜಾಲರು ಕಿಟಿಕಿ ಯಿಂದ ಬಿದ್ದು ರೋಗಿಷ್ಟನಾದದರಿಂದ ಸೇವಕರನ್ನು ಕರೆದು--ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ--ನಾನು ಈ ರೋಗದಿಂದ ವಾಸಿಯಾ ಗುವೇನೋ ಇಲ್ಲವೋ ಎಂದು ವಿಚಾರಿಸಲು ಅವರನ್ನು ಕಳುಹಿಸಿದನು.

3ಆದರೆ ಕರ್ತನ ದೂತನು ತಿಷ್ಬೀಯ ನಾದ ಎಲೀಯನಿಗೆ--ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ ಹೇಳಬೇಕಾ ದದ್ದೇನಂದರೆ--ಇಸ್ರಾಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀವು ಎಕ್ರೋನಿನ ದೇವ ರಾದ ಬಾಳ್ಜೆಬೂಬನನ್ನು ವಿಚಾರಿಸಲು ಹೋಗುತ್ತೀರಿ?

4ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಆಗ ಎಲೀಯನು ಹೊರಟುಹೋದನು.

5ಸೇವಕರು ಅವನ ಬಳಿಗೆ ತಿರುಗಿ ಬಂದಾಗ ಅವನು ಅವರಿಗೆ--ನೀವು ಈಗ ತಿರುಗಿ ಬಂದದ್ದೇನು ಅಂದನು.

6ಅವರು ಅವನಿಗೆ ಹೇಳಿದ್ದೇನಂದರೆ--ಒಬ್ಬ ಮನು ಷ್ಯನು ಎದುರಾಗಿ ಬಂದು ನಮಗೆ--ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ತಿರುಗಿ ಹೋಗಿ-- ಇಸ್ರಾ ಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ಕಳುಹಿಸುವದೇನು? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆಂಬದಾಗಿ ಅವನಿಗೆ ಹೇಳಿರಿ ಅಂದನು.

೨ ಅರಸುಗಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी