ಯೆರೆಮಿಯ 8:8

ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 8

6ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.

7ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು.

8ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ.

9ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?

10ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ.

ಯೆರೆಮಿಯ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी