ಯೆಹೋಶುವ 14:4

ಯೋಸೇಫನ ಮಕ್ಕಳಾದ ಮನಸ್ಸೆಯೂ ಎಫ್ರಾಯಾಮನೂ ಎರಡು ಗೋತ್ರಗಳಾಗಿದ್ದರು. ಅವರು ಲೇವಿಯರಿಗೆ ದೇಶದಲ್ಲಿ ಪಾಲು ಕೊಡಲಿಲ್ಲ; ವಾಸಮಾಡುವ ಪಟ್ಟಣಗಳನ್ನೂ ಪಶುಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ ಪ್ರಾಂತ್ಯಗಳನ್ನೂ ಮಾತ್ರ ಕೊಟ್ಟರು.

ಸಂದರ್ಭದೊಂದಿಗೆ ಓದಿ · ಯೆಹೋಶುವ 14

2ಅವರ ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಭತ್ತೂವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಬಾಧ್ಯವಾಗಿ ಪಾಲು ಹಂಚಿದರು.

3ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ;

4ಯೋಸೇಫನ ಮಕ್ಕಳಾದ ಮನಸ್ಸೆಯೂ ಎಫ್ರಾಯಾಮನೂ ಎರಡು ಗೋತ್ರಗಳಾಗಿದ್ದರು. ಅವರು ಲೇವಿಯರಿಗೆ ದೇಶದಲ್ಲಿ ಪಾಲು ಕೊಡಲಿಲ್ಲ; ವಾಸಮಾಡುವ ಪಟ್ಟಣಗಳನ್ನೂ ಪಶುಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ ಪ್ರಾಂತ್ಯಗಳನ್ನೂ ಮಾತ್ರ ಕೊಟ್ಟರು.

5ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲ್‌ ಮಕ್ಕಳು ಮಾಡಿ ದೇಶವನ್ನು ಪಾಲು ಹಂಚಿಕೊಂಡರು.

6ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್‌ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ;

ಯೆಹೋಶುವ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी