ವಿಮೋಚನಕಾಂಡ 12:20

ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 12

18ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.

19ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್‌ ಸಭೆಯೊಳಗಿಂದ ತೆಗೆದು ಹಾಕಬೇಕು.

20ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು.

21ಆಗ ಮೋಶೆಯು ಇಸ್ರಾಯೇಲಿನ ಎಲ್ಲಾ ಹಿರಿಯ ರನ್ನು ಕರೆದು ಅವರಿಗೆ--ನಿಮ್ಮ ಗೋತ್ರಗಳ ಪ್ರಕಾರ ಕುರಿಗಳನ್ನು ತೆಗೆದುಕೊಂಡು ಪಸ್ಕವನ್ನು (ಕುರಿಯನ್ನು) ಕೊಯ್ಯಿರಿ.

22ಹಿಸ್ಸೋಪಿನ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿ ಲಿನ ಮೇಲಿನ ಅಡ್ಡಗಂಬಕ್ಕೂ ಪಕ್ಕದಲ್ಲಿರುವ ಎರಡು ನಿಲುವುಗಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವ ವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೋಗಬಾರದು.

ವಿಮೋಚನಕಾಂಡ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी