ಯೆಶಾಯ 1:5

ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.

ಸಂದರ್ಭದೊಂದಿಗೆ ಓದಿ · ಯೆಶಾಯ 1

3ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ.

4ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ.

5ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.

6ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.

7ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.

ಯೆಶಾಯ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी