ಆಮೋಸ 9:13

ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು.

ಸಂದರ್ಭದೊಂದಿಗೆ ಓದಿ · ಆಮೋಸ 9

11ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.

12ಆಗ ಅವರು ಎದೋ ಮಿನ ಮಿಕ್ಕಭಾಗವನ್ನೂ ನನ್ನ ಹೆಸರಿನಿಂದ ಕರೆಯಲ್ಪ ಡುವ ಎಲ್ಲಾ ಅನ್ಯಜನಾಂಗಗಳನ್ನೂ ಸ್ವಾಧೀನಮಾಡಿ ಕೊಳ್ಳುವರೆಂದು ಇದನ್ನು ಮಾಡುವವನಾದ ಕರ್ತನು ಹೇಳುತ್ತಾನೆ.

13ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು.

14ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.

15ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.

ಆಮೋಸ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी