ಯೋಹಾನನು 19:25

ಆಗ ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ಸಹೋದರಿಯೂ ಕ್ಲೋಫನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.

ಸಂದರ್ಭದೊಂದಿಗೆ ಓದಿ · ಯೋಹಾನನು 19

23ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು. ಆತನ ಮೇಲಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು.

24ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ

25ಆಗ ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ಸಹೋದರಿಯೂ ಕ್ಲೋಫನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.

26ತನ್ನ ತಾಯಿಯು ಮತ್ತು ತಾನು ಪ್ರೀತಿಸಿದ ಶಿಷ್ಯನು ಹತ್ತಿರದಲ್ಲಿ ನಿಂತಿರುವದನ್ನು ಯೇಸು ನೋಡಿ ತನ್ನ ತಾಯಿಗೆ--ಸ್ತ್ರೀಯೇ, ಇಗೋ, ನಿನ್ನ ಮಗನು ಅಂದನು.

27ಆಮೇಲೆ ಆತನು ಆ ಶಿಷ್ಯನಿಗೆ--ಇಗೋ, ನಿನ್ನ ತಾಯಿಯು ಅಂದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಸೇರಿಸಿಕೊಂಡನು.

ಯೋಹಾನನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी