ಯೆಹೆಜ್ಕೇಲನು 34:10

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ನನ್ನ ಮಂದೆ ಯನ್ನು ಅವರ ಕೈಯಿಂದ ವಿಚಾರಿಸುವೆನು; ಅವರು ಮಂದೆ ಮೇಯಿಸುವದನ್ನು ನಿಲ್ಲಿಸಿಬಿಡುತ್ತೇನೆ. ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿ ಕೊಳ್ಳರು. ನಾನು ನನ್ನ ಮಂದೆಯನ್ನು ಅವರಿಗೆ ಆಹಾರ ವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 34

8ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದದ ರಿಂದಲೂ ನನ್ನ ಮಂದೆಯು ಕುರುಬ ನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರು ಬರು ನನ್ನ ಮಂದೆಯನ್ನು ಹುಡುಕದೆ ಇದ್ದದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದಿದ್ದದರಿಂದಲೂ

9ಓ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.

10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ನನ್ನ ಮಂದೆ ಯನ್ನು ಅವರ ಕೈಯಿಂದ ವಿಚಾರಿಸುವೆನು; ಅವರು ಮಂದೆ ಮೇಯಿಸುವದನ್ನು ನಿಲ್ಲಿಸಿಬಿಡುತ್ತೇನೆ. ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿ ಕೊಳ್ಳರು. ನಾನು ನನ್ನ ಮಂದೆಯನ್ನು ಅವರಿಗೆ ಆಹಾರ ವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.

11ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಹೌದು, ನಾನೇ ನನ್ನ ಕುರಿಗಳನ್ನು ವಿಚಾರಿಸಿ ಅವುಗಳನ್ನು ಹುಡುಕುತ್ತೇನೆ.

12ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.

ಯೆಹೆಜ್ಕೇಲನು 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी