ಮತ್ತಾಯನು 23:24

ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.

ಸಂದರ್ಭದೊಂದಿಗೆ ಓದಿ · ಮತ್ತಾಯನು 23

22ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ.

23ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ

24ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.

25ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.

26ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು.

ಮತ್ತಾಯನು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी