ಯೋನ 4:8

ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.

ಸಂದರ್ಭದೊಂದಿಗೆ ಓದಿ · ಯೋನ 4

6ದೇವರಾದ ಕರ್ತನು ಒಂದು ಸೋರೇ ಗಿಡವನ್ನು ಎಬ್ಬಿಸಿ, ಅದು ಯೋನನ ಮೇಲೆ ಹಬ್ಬಿ ಬಂದು ಅವನ ತಲೆಯ ಮೇಲೆ ನೆರಳುಕೊಟ್ಟು ಅವನ ದುಃಖದಿಂದ ಅವನನ್ನು ಬಿಡಿಸುವಂತೆ ಮಾಡಿದನು: ಯೋನನು ಆ ಸೋರೇ ಗಿಡದ ವಿಷಯವಾಗಿ ಬಹಳ ಸಂತೋಷಪಟ್ಟನು.

7ಆದರೆ ಮಾರನೇ ದಿನದಲ್ಲಿ ಉದಯವಾದಾಗ ದೇವರು ಒಂದು ಹುಳವನ್ನು ಸಿದ್ಧಮಾಡಿದನು; ಅದು ಸೋರೇ ಗಿಡವನ್ನು ಒಣಗುವ ಹಾಗೆ ಹೊಡೆಯಿತು.

8ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.

9ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.

10ಆಗ ಕರ್ತನು ಹೇಳಿದ್ದೇನಂದರೆ--ನೀನು ಕಷ್ಟಪಡದಂಥ, ಬೆಳೆಸದಂಥ, ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶನವಾದಂಥ,

ಯೋನ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी