ಅರಣ್ಯಕಾಂಡ 14:16

ಕರ್ತನು ಈ ಜನರನ್ನು ಅವರಿಗೆ ಪ್ರಮಾಣಮಾಡಿದ ದೇಶಕ್ಕೆ ತರಲು ಶಕ್ತಿಸಾಲದ ಕಾರಣ ಅವರನ್ನು ಅರಣ್ಯದಲ್ಲಿ ಕೊಂದು ಹಾಕಿದನು ಎಂದು ಹೇಳುವರು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 14

14ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ.

15ಈಗ ನೀನು ಈ ಜನರನ್ನು ಒಬ್ಬ ಮನುಷ್ಯನೋ ಎಂಬಂತೆ ಕೊಂದುಹಾಕಿದರೆ ನಿನ್ನ ಸುದ್ದಿಯನ್ನು ಕೇಳಿದ ಜನಾಂಗಗಳು--

16ಕರ್ತನು ಈ ಜನರನ್ನು ಅವರಿಗೆ ಪ್ರಮಾಣಮಾಡಿದ ದೇಶಕ್ಕೆ ತರಲು ಶಕ್ತಿಸಾಲದ ಕಾರಣ ಅವರನ್ನು ಅರಣ್ಯದಲ್ಲಿ ಕೊಂದು ಹಾಕಿದನು ಎಂದು ಹೇಳುವರು.

17ಈಗ ನೀನು ಹೇಳಿದ ಪ್ರಕಾರ ನನ್ನ ಕರ್ತನ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ.

18ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ?

ಅರಣ್ಯಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी