ಯೆಹೆಜ್ಕೇಲನು 20:32

ನಾವು ಅನ್ಯಜನಾಂಗಗಳ ಹಾಗೆಯೂ ದೇಶದಲ್ಲಿ ರುವ ಕುಟುಂಬಗಳ ಹಾಗೆಯೂ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ಆಗದು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 20

30ಆದದರಿಂದ ನೀನು ಇಸ್ರಾಯೇಲಿನ ಮನೆತನದವರಿಗೆ ಹೇಳಬೇಕಾ ದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಅಪವಿತ್ರ ಪಡಿಸಿಕೊಳ್ಳುತ್ತೀರೋ? ಅವರ ಅಸಹ್ಯವಾದವುಗಳ ಪ್ರಕಾರ ವ್ಯಭಿಚಾರಮಾಡುತ್ತೀರೋ?

31ನಿಮ್ಮ ದಾನ ಗಳನ್ನು ತರುವಾಗಲೂ ನಿಮ್ಮ ಕುಮಾರರನ್ನು ಬೆಂಕಿ ಯಿಂದ ದಾಟಿಸುವಾಗಲೂ ನೀವು ಇಂದಿನ ವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿ ಕೊಳ್ಳುತ್ತೀರಿ; ಹೀಗಾದರೆ ನಾನು ನಿಮ್ಮಿಂದ ವಿಚಾರಿಸ ಲ್ಪಟ್ಟೆನೊ? ನನ್ನ ಜೀವದಾಣೆ ನಾನು ನಿಮ್ಮಿಂದ ವಿಚಾರಿಸ ಲ್ಪಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ;

32ನಾವು ಅನ್ಯಜನಾಂಗಗಳ ಹಾಗೆಯೂ ದೇಶದಲ್ಲಿ ರುವ ಕುಟುಂಬಗಳ ಹಾಗೆಯೂ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ಆಗದು.

33ದೇವರಾದ ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಸುರಿಸಿದ ರೋಷ ದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡಿಸು ತ್ತೇನೆ.

34ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಸುರಿಸಿದ ರೋಷದಿಂದಲೂ ನಿಮ್ಮನ್ನು ಜನ ಗಳೊಳಗಿಂದ ಹೊರತಂದು ನೀವು ಚದರಿಹೋಗಿ ರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸಿ,

ಯೆಹೆಜ್ಕೇಲನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी