ವಿಮೋಚನಕಾಂಡ 30:6

ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 30

4ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು.

5ಆ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು.

6ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.

7ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು.

8ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು.

ವಿಮೋಚನಕಾಂಡ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी