ದಾನಿಯೇಲನು 4:15

ಆದಾಗ್ಯೂ ಅದರ ಬೇರಿನ ಮೋಟನ್ನು ಕಬ್ಬಿಣ, ಹಿತ್ತಾಳೆಗಳ ಕಟ್ಟುಳ್ಳದ್ದ ನ್ನಾಗಿ ಮಾಡಿ ಭೂಮಿಯಲ್ಲಿಯೂ ಬಯಲಿನ ಎಳೆಯ ಹುಲ್ಲಿನಲ್ಲಿಯೂ ಬಿಡಿರಿ; ಅದು ಆಕಾಶದ ಮಂಜಿನಿಂದ ತೇವವಾಗಲಿ; ಅದರ ಪಾಲು ಮೃಗಗಳ ಸಂಗಡ ಭೂಮಿಯ ಹುಲ್ಲಿನಲ್ಲಿರಲಿ.

ಸಂದರ್ಭದೊಂದಿಗೆ ಓದಿ · ದಾನಿಯೇಲನು 4

13ನನ್ನ ಹಾಸಿಗೆಯ ಮೇಲೆ ನನ್ನ ಮನಸ್ಸಿನ ದರ್ಶನ ಗಳನ್ನು ನಾನು ನೋಡಲಾಗಿ; ಇಗೋ, ಒಬ್ಬ ಪಾಲಕನು ಮತ್ತು ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.

14ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ.

15ಆದಾಗ್ಯೂ ಅದರ ಬೇರಿನ ಮೋಟನ್ನು ಕಬ್ಬಿಣ, ಹಿತ್ತಾಳೆಗಳ ಕಟ್ಟುಳ್ಳದ್ದ ನ್ನಾಗಿ ಮಾಡಿ ಭೂಮಿಯಲ್ಲಿಯೂ ಬಯಲಿನ ಎಳೆಯ ಹುಲ್ಲಿನಲ್ಲಿಯೂ ಬಿಡಿರಿ; ಅದು ಆಕಾಶದ ಮಂಜಿನಿಂದ ತೇವವಾಗಲಿ; ಅದರ ಪಾಲು ಮೃಗಗಳ ಸಂಗಡ ಭೂಮಿಯ ಹುಲ್ಲಿನಲ್ಲಿರಲಿ.

16ಅವನ ಹೃದಯವು ಮನುಷ್ಯನ ಹೃದಯದಂತೆ ಇರದೆ ಬದಲಾಗಲಿ; ಮೃಗದ ಹೃದಯವು ಅವನಿಗೆ ಕೊಡಲ್ಪಡಲಿ; ಏಳು ಕಾಲಗಳು ಅವನನ್ನು ದಾಟಿಹೋಗಲಿ ಎಂದು ಹೇಳಿದನು.

17ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.

ದಾನಿಯೇಲನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी