ರೂತಳು 2:13

ಅದಕ್ಕೆ ಅವಳು ನನ್ನ ಒಡೆಯನೇ, ನನಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಯಾಕಂದರೆ ನನ್ನನ್ನು ನೀನು ಆದರಿಸಿದಿ; ನಾನು ನಿನ್ನ ದಾಸಿಗಳಲ್ಲಿ ಒಬ್ಬಳಲ್ಲ ದಿದ್ದರೂ ನನ್ನ ಕೂಡ ಸ್ನೇಹದಿಂದ ಮಾತನಾಡಿದಿಅಂದಳು.

ಸಂದರ್ಭದೊಂದಿಗೆ ಓದಿ · ರೂತಳು 2

11ಆಗ ಬೋವಜನು ಅವಳಿಗೆ ಪ್ರತ್ಯುತ್ತರವಾಗಿ ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿ ದ್ದೆಲ್ಲವೂ ನಿನ್ನ ತಂದೆತಾಯಿಗಳನ್ನೂ ಹುಟ್ಟಿದ ದೇಶವನ್ನೂ ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿಸಲ್ಪಟ್ಟಿದೆ.

12ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ; ಇಸ್ರಾಯೇಲ್‌ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು.

13ಅದಕ್ಕೆ ಅವಳು ನನ್ನ ಒಡೆಯನೇ, ನನಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಯಾಕಂದರೆ ನನ್ನನ್ನು ನೀನು ಆದರಿಸಿದಿ; ನಾನು ನಿನ್ನ ದಾಸಿಗಳಲ್ಲಿ ಒಬ್ಬಳಲ್ಲ ದಿದ್ದರೂ ನನ್ನ ಕೂಡ ಸ್ನೇಹದಿಂದ ಮಾತನಾಡಿದಿಅಂದಳು.

14ಇದಲ್ಲದೆ ಬೋವಜನು ಅವಳಿಗೆ ಊಟದ ವೇಳೆಯಲ್ಲಿ ಹತ್ತಿರ ಬಂದು ರೊಟ್ಟಿಯ ತುತ್ತನ್ನು ಹುಳಿರಸದಲ್ಲಿ ಅದ್ದಿ ತಿನ್ನು ಅಂದನು. ಅವಳು ಕೊಯ್ಯುವವರ ಬಳಿಯಲ್ಲಿ ಕುಳಿತಳು. ಆಗ ಅವನು ಅವಳಿಗೆ ಹುರಿದ ತೆನೆಯನ್ನು ಕೊಟ್ಟನು. ಅವಳು ತಿಂದು ತೃಪ್ತಿಪಟ್ಟು ಇನ್ನೂ ಉಳಿಸಿಟ್ಟುಕೊಂಡಳು.

15ಅವಳು ಹಕ್ಕಲಾದುಕೊಳ್ಳಲು ಏಳುವಾಗ ಬೋವ ಜನು ತನ್ನ ಯುವಕರಿಗೆ ಆಜ್ಞಾಪಿಸಿ ಇವಳು ಕೊಯಿದ ಸಿವುಡುಗಳ ಮಧ್ಯದಲ್ಲಿ ಹಕ್ಕಲಾದುಕೊಳ್ಳಲಿ. ನೀವು ಅವಳನ್ನು ನಿಂದಿಸಬೇಡಿರಿ;

ರೂತಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी