ನೀನು ನನಗೆ ಕೊಟ್ಟಿರುವವುಗಳೆಲ್ಲವು ನಿನ್ನವುಗಳೇ ಎಂದು ಈಗ ಅವರು ತಿಳಿದುಕೊಂಡಿದ್ದಾರೆ.
5ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.
6ಲೋಕದೊಳಗಿಂದ ನೀನು ನನಗೆ ಕೊಟ್ಟ ಮನು ಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರತ್ಯಕ್ಷಪಡಿಸಿದ್ದೇನೆ. ಅವರು ನಿನ್ನವರಾಗಿದ್ದರು; ನೀನು ಅವರನ್ನು ನನಗೆ ಕೊಟ್ಟಿದ್ದೀ; ಇದಲ್ಲದೆ ಅವರು ನಿನ್ನ ವಾಕ್ಯವನ್ನು ಕೈ ಕೊಂಡಿದ್ದಾರೆ.
7ನೀನು ನನಗೆ ಕೊಟ್ಟಿರುವವುಗಳೆಲ್ಲವು ನಿನ್ನವುಗಳೇ ಎಂದು ಈಗ ಅವರು ತಿಳಿದುಕೊಂಡಿದ್ದಾರೆ.
8ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.
9ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ