ಆತನು ಆಕೆಯ ಮೇಲೆ ತನ್ನ ಕೈಗಳನ್ನು ಇಟ್ಟನು; ಕೂಡಲೆ ಆಕೆಯು ನೆಟ್ಟಗಾಗಿ ದೇವರನ್ನು ಮಹಿಮೆಪಡಿಸಿದಳು.
11ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.
12ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ--ಸ್ತ್ರೀಯೇ, ನೀನು ಈ ನಿನ್ನ ರೋಗದಿಂದ ಬಿಡುಗಡೆಯಾಗಿದ್ದೀ ಎಂದು ಹೇಳಿ
13ಆತನು ಆಕೆಯ ಮೇಲೆ ತನ್ನ ಕೈಗಳನ್ನು ಇಟ್ಟನು; ಕೂಡಲೆ ಆಕೆಯು ನೆಟ್ಟಗಾಗಿ ದೇವರನ್ನು ಮಹಿಮೆಪಡಿಸಿದಳು.
14ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು.
15ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ