ಯೆಹೆಜ್ಕೇಲನು 38:10

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 38

8ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್‌ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ.

9ನೀನು ಮೇಲೇರಿ ಬಿರುಗಾಳಿಯಂತೆ ಬರುವಿ. ನೀನೂ ನಿನ್ನ ಎಲ್ಲಾ ದಂಡುಗಳೂ ಮತ್ತು ಅನೇಕ ಜನರ ಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ.

10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,

11ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ,

12ಸುಲಿಗೆ ಯನ್ನು ಕೊಳ್ಳೆಯನ್ನು ತೆಗೆದುಕೊಳ್ಳುವೆನು; ಹೀಗೆ ನಿವಾಸಗಳಿದ್ದು ಬೀಡಾಗಿದ್ದ ಸ್ಥಳಗಳಲ್ಲಿಯೂ ಜನಾಂಗ ಗಳಿಂದ ಕೂಡಿಸಲ್ಪಟ್ಟಂತಹ ದನಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಮಾಡು ವಂಥ ಜನರ ಮೇಲೆಯೂ ಕೈಹಾಕವೆನು ಎಂದು ಹೇಳುವಿ.

ಯೆಹೆಜ್ಕೇಲನು 38 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी