ವಿಮೋಚನಕಾಂಡ 34:7

ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 34

5ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು.

6ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ

7ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.

8ಆಗ ಮೋಶೆಯು ತ್ವರೆಪಟ್ಟು ನೆಲಕ್ಕೆ ಬೊಗ್ಗಿ ಆತನನ್ನು ಆರಾಧಿಸಿದನು.

9ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು.

ವಿಮೋಚನಕಾಂಡ 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी