ಯೆಶಾಯ 45:22

ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.

ಸಂದರ್ಭದೊಂದಿಗೆ ಓದಿ · ಯೆಶಾಯ 45

20ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.

21ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.

22ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.

23ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.

24ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.

ಯೆಶಾಯ 45 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी