ಅಪೊಸ್ತಲರ ಕೃತ್ಯಗಳು 19:8

ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 19

6ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.

7ಅವರು ಸುಮಾರು ಹನ್ನೆರಡು ಮಂದಿ ಗಂಡಸರು.

8ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.

9ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.

10ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.

ಅಪೊಸ್ತಲರ ಕೃತ್ಯಗಳು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी