೨ ಸಮುವೇಲನು 16:18

ಹೂಷೈ ಅಬ್ಷಾಲೋಮನಿಗೆ--ಹಾಗಲ್ಲ, ಆದರೆ ಕರ್ತನೂ ಈ ಜನವೂ ಇಸ್ರಾಯೇಲಿನ ಎಲ್ಲಾ ಜನರೂ ಯಾರನ್ನು ಆದುಕೊಳ್ಳುವರೋ ನಾನೂ ಅವನ ಪಕ್ಷದವನಾಗಿರುವೆನು; ನಾನು ಅವನ ಬಳಿಯಲ್ಲಿ ಇರುವೆನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 16

16ಅರ್ಕೀಯನಾದ ಹೂಷೈ ಯೆಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದು--ಅರಸನು ಬಾಳಲಿ, ಅರಸನು ಬಾಳಲಿ ಅಂದನು.

17ಅಬ್ಷಾಲೋಮನು ಅವನಿಗೆ--ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು.

18ಹೂಷೈ ಅಬ್ಷಾಲೋಮನಿಗೆ--ಹಾಗಲ್ಲ, ಆದರೆ ಕರ್ತನೂ ಈ ಜನವೂ ಇಸ್ರಾಯೇಲಿನ ಎಲ್ಲಾ ಜನರೂ ಯಾರನ್ನು ಆದುಕೊಳ್ಳುವರೋ ನಾನೂ ಅವನ ಪಕ್ಷದವನಾಗಿರುವೆನು; ನಾನು ಅವನ ಬಳಿಯಲ್ಲಿ ಇರುವೆನು.

19ಇದಲ್ಲದೆ ನಾನು ಯಾರನ್ನು ಸೇವಿಸತಕ್ಕದ್ದು? ಅವನ ಮಗನ ಸಮ್ಮುಖ ದಲ್ಲಿ ಅಲ್ಲವೇ? ನಾನು ನಿನ್ನ ತಂದೆಯ ಸಮ್ಮುಖದಲ್ಲಿ ಹೇಗೆ ಸೇವಿಸಿದೆನೋ ಹಾಗೆಯೇ ನಿನ್ನ ಸಮ್ಮುಖದಲ್ಲಿ ಇರುವೆನು ಅಂದನು.

20ಆಗ ಅಬ್ಷಾಲೋಮನು ಅಹೀತೋಫೆಲನಿಗೆ--ನಾವು ಮಾಡಬೇಕಾದದ್ದನ್ನು ನೀನು ಯೋಚನೆ ಮಾಡಿ ಹೇಳು ಅಂದನು.

೨ ಸಮುವೇಲನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी