ಅದು ಚರ್ಮದ ಹೊರ ಗೆಲ್ಲಾ ಹೆಚ್ಚಾಗಿ ಹರಡಿದ್ದರೆ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು, ಅದು ರೋಗವೇ.
20ಯಾಜಕನು ಅದನ್ನು ನೋಡಿ ದಾಗ ಇಗೋ, ಅದು ಚರ್ಮಕ್ಕಿಂತ ತಗ್ಗಾಗಿ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು; ಅದು ಹುಣ್ಣಿನಿಂದ ಒಡೆದುಹೋದ ಕುಷ್ಠ ವ್ಯಾಧಿಯಾಗಿ ರುವದು.
21ಆದರೆ ಯಾಜಕನು ಅದನ್ನು ನೋಡಲು ಇಗೋ, ಅದರಲ್ಲಿ ಬಿಳಿಯ ಕೂದಲು ಇರದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ತಗ್ಗಾಗದೆ ಸ್ವಲ್ಪ ಮೊಬ್ಬಾಗಿದ್ದರೆ ಆಗ ಯಾಜಕನು ಅವನನ್ನು ಏಳು ದಿನಗಳು ಮುಚ್ಚಿಡಬೇಕು.
22ಅದು ಚರ್ಮದ ಹೊರ ಗೆಲ್ಲಾ ಹೆಚ್ಚಾಗಿ ಹರಡಿದ್ದರೆ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು, ಅದು ರೋಗವೇ.
23ಆದರೆ ಆ ಹೊಳಪಾದ ಮಚ್ಚೆಯು ಹರಡದೆ ಅದೇ ಸ್ಥಳದಲ್ಲಿ ಇದ್ದು ಅದು ಉರಿಯುವ ಹುಣ್ಣಾಗಿದ್ದರೂ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.
24ಇಲ್ಲವೆ ಅವನ ದೇಹದ ಚರ್ಮದಲ್ಲಿ ಬೆಂಕಿಯ ಬೊಬ್ಬೆಯು ಉಂಟಾಗಿ ಆ ಬೊಬ್ಬೆಯ ಹಸಿಮಾಂಸವು ಬಿಳುಪಾದ ಇಲ್ಲವೆ ಸ್ವಲ್ಪ ಕೆಂಪಗೆ, ಬಿಳಿಯ ಹೊಳಪಾದ ಮಚ್ಚೆಯಾಗಿದ್ದರೆ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ