೧ ಯೋಹಾನನು 5:9

ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.

ಸಂದರ್ಭದೊಂದಿಗೆ ಓದಿ · ೧ ಯೋಹಾನನು 5

7ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ.

8ಆತ್ಮ ನೀರು ರಕ್ತ ಈ ಮೂವರು ಭೂಮಿಯ ಮೇಲೆ ಸಾಕ್ಷಿ ಹೇಳುತ್ತಾರೆ; ಈ ಮೂವರು ಒಂದೇಯಾಗಿ ಒಪ್ಪಿಕೊಳ್ಳುತ್ತಾರೆ.

9ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.

10ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.

11ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.

೧ ಯೋಹಾನನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी