ಯೆಶಾಯ 42:9

ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ; ಅವು ಹುಟ್ಟುವದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 42

7ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.

8ನಾನೇ ಕರ್ತನು, ಅದೇ ನನ್ನ ಹೆಸರು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತೋತ್ರ ವನ್ನು ಎರಕದ ವಿಗ್ರಹಗಳಿಗೂ ಕೊಡೆನು.

9ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ; ಅವು ಹುಟ್ಟುವದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.

10ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ.

11ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್‌ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ,

ಯೆಶಾಯ 42 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी