ಆದರೆ ಆ ಯೌವನಸ್ಥನು ಆತನು ಹೇಳಿದ್ದನ್ನು ಕೇಳಿ ದುಃಖ ದಿಂದ ಹೊರಟುಹೋದನು. ಯಾಕಂದರೆ ಅವನಿಗೆ ಬಹಳ ಆಸ್ತಿ ಇತ್ತು.
20ಆಗ ಆ ಯೌವನಸ್ಥನು ಆತನಿಗೆ--ಇವೆಲ್ಲವುಗಳನ್ನು ನಾನು ಬಾಲ್ಯದಿಂದಲೇ ಕೈಕೊಂಡಿದ್ದೇನೆ; ಇನ್ನು ನನಗೇನು ಕಡಿಮೆಯಾಗಿದೆ ಎಂದು ಕೇಳಿದನು.
21ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
22ಆದರೆ ಆ ಯೌವನಸ್ಥನು ಆತನು ಹೇಳಿದ್ದನ್ನು ಕೇಳಿ ದುಃಖ ದಿಂದ ಹೊರಟುಹೋದನು. ಯಾಕಂದರೆ ಅವನಿಗೆ ಬಹಳ ಆಸ್ತಿ ಇತ್ತು.
23ತರುವಾಯ ಯೇಸು ತನ್ನ ಶಿಷ್ಯರಿಗೆ-- ಐಶ್ವರ್ಯ ವಂತನು ಪರಲೋಕ ರಾಜ್ಯದಲ್ಲಿ ಸೇರುವದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
24ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ