ಯೆರೆಮಿಯ 52:1

ಚಿದ್ಕೀಯನು ಆಳುವದಕ್ಕೆ ಆರಂಭಿಸಿದಾಗ ಇಪ್ಪತ್ತೊಂದು ವರುಷದವನಾಗಿದ್ದನು; ಅವನು ಹನ್ನೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು; ಅವನ ತಾಯಿಯ ಹೆಸರು ಲಿಬ್ನದವನಾದ ಯೆರೆವಿಾಯನ ಮಗಳಾದ ಹಮೂಟಲ್‌.

ಸಂದರ್ಭದೊಂದಿಗೆ ಓದಿ · ಯೆರೆಮಿಯ 52

1ಚಿದ್ಕೀಯನು ಆಳುವದಕ್ಕೆ ಆರಂಭಿಸಿದಾಗ ಇಪ್ಪತ್ತೊಂದು ವರುಷದವನಾಗಿದ್ದನು; ಅವನು ಹನ್ನೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು; ಅವನ ತಾಯಿಯ ಹೆಸರು ಲಿಬ್ನದವನಾದ ಯೆರೆವಿಾಯನ ಮಗಳಾದ ಹಮೂಟಲ್‌.

2ಅವನು ಯೆಹೋಯಾಕೀಮನು ಮಾಡಿದ್ದೆಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.

3ಕರ್ತನು ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವ ವರೆಗೆ ಮಾಡಿದ ಕೋಪದಿಂದ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.

ಯೆರೆಮಿಯ 52 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी