ಯೆಶಾಯ 37:6

ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ನೀನು ಕೇಳಿದ್ದೀ; ಆದರೆ ನೀನು ಅವುಗಳಿಗೆ ಹೆದರಬೇಡ.

ಸಂದರ್ಭದೊಂದಿಗೆ ಓದಿ · ಯೆಶಾಯ 37

4ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.

5ಅರಸ ನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ ಯೆಶಾಯನು--

6ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ನೀನು ಕೇಳಿದ್ದೀ; ಆದರೆ ನೀನು ಅವುಗಳಿಗೆ ಹೆದರಬೇಡ.

7ಇಗೋ, ನಾನು ಅವನ ಮೇಲೆ ಒಂದು ವಿಪತ್ತನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಈ ಮಾತುಗಳನ್ನು ನಿಮ್ಮ ಯಜಮಾನರಿಗೆ ತಿಳಿಸಿರಿ ಎಂದು ಹೇಳಿದನು.

8ಹೀಗೆ ರಬ್ಷಾಕನು ಹಿಂತಿರುಗಿ ಹೋಗುವಾಗ ದಾರಿ ಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು.

ಯೆಶಾಯ 37 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी