ಯೆರೆಮಿಯ 25:32

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವದು; ಭೂಮಿಯ ಮೇರೆಗಳಿಂದ ಮಹಾಬಿರುಗಾಳಿ ಎಬ್ಬಿಸ ಲ್ಪಡುವದು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 25

30ಆದದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ ಅವರಿಗೆ ಹೇಳತಕ್ಕದ್ದೇ ನಂದರೆ--ಕರ್ತನು ಉನ್ನತದಿಂದ ಘರ್ಜಿಸಿ ತನ್ನ ಪರಿಶುದ್ಧ ನಿವಾಸದೊಳಗಿಂದ ತನ್ನ ಶಬ್ದವನ್ನು ಕೊಡು ವನು ತನ್ನ ನಿವಾಸದ ಮೇಲೆ ಗಟ್ಟಿಯಾಗಿ ಘರ್ಜಿಸಿ ದ್ರಾಕ್ಷೇ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವನು.

31ಭೂಮಿಯ ಅಂತ್ಯಗಳ ವರೆಗೆ ಘೋಷವು ಬರು ವದು; ಕರ್ತನಿಗೆ ಜನಾಂಗಗಳ ಸಂಗಡ ವ್ಯಾಜ್ಯವದೆ; ಆತನು ಎಲ್ಲಾ ಮನುಷ್ಯರ ಸಂಗಡ ವಾದಿಸುವನು; ದುಷ್ಟರನ್ನು ಕತ್ತಿಗೆ ಒಪ್ಪಿಸುವೆನೆಂದು ಕರ್ತನು ಅನ್ನುತ್ತಾನೆ.

32ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವದು; ಭೂಮಿಯ ಮೇರೆಗಳಿಂದ ಮಹಾಬಿರುಗಾಳಿ ಎಬ್ಬಿಸ ಲ್ಪಡುವದು.

33ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯ ವರೆಗೆ ಕರ್ತ ನಿಂದ ಕೊಂದುಹಾಕಲ್ಪಟ್ಟವರು ಇರುವರು; ಅವರಿ ಗೋಸ್ಕರ ಗೋಳಾಡುವದಿಲ್ಲ; ಅವರನ್ನು ಕೂಡಿಸುವ ದಿಲ್ಲ; ಅವರನ್ನು ಹೂಣಿಡುವದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು.

34ಓ ಕುರುಬರೇ, ಗೋಳಿಟ್ಟುಕೂಗಿರಿ; ಮಂದೆಯಲ್ಲಿ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ; ನಿಮ್ಮನ್ನು ಕೊಲ್ಲುವದಕ್ಕೂ ಚದರಿಸುವದಕ್ಕೂ ದಿನಗಳು ತುಂಬಿ ಅವೆ; ಆಗ ನೀವು ರಮ್ಯವಾದ ಪಾತ್ರೆಯ ಹಾಗೆ ಬೀಳುವಿರಿ.

ಯೆರೆಮಿಯ 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी