ನನ್ನ ಪ್ರಿಯನು ಬಾಗಲ ಸಂದಿನಲ್ಲಿ ತನ್ನ ಕೈಹಾಕಿದನು; ನನ್ನ ಕರುಳುಗಳು ಅವನಿಗಾಗಿ ಮರುಗಿದವು.
2ನಾನು ನಿದ್ರೆಗೈದರೂ ನನ್ನ ಹೃದಯವು ಎಚ್ಚರ ವಾಗುವದು. ಇದು ತಟ್ಟುವ ನನ್ನ ಪ್ರಿಯನ ಶಬ್ದ; ಅದು--ನನಗೆ ತೆರೆ, ನನ್ನ ಸಹೋದರಿಯೇ, ನನ್ನ ಪ್ರಿಯಳೇ, ನನ್ನ ಪಾರಿವಾಳವೇ, ನಿರ್ಮಲೆಯೇ, ನನ್ನ ತಲೆಯು ಮಂಜಿನಿಂದಲೂ ನನ್ನ ಕೂದಲು ರಾತ್ರಿಯ ಬಿಂದುಗಳಿಂದಲೂ ತೋಯಲ್ಪಟ್ಟಿವೆ ಎಂಬದು.
3ನಾನು ನನ್ನ ಅಂಗಿಯನ್ನು ತೆಗೆದಿದ್ದೇನೆ; ಅದನ್ನು ತೊಟ್ಟುಕೊಳ್ಳುವದು ಹೇಗೆ? ನಾನು ನನ್ನ ಕಾಲು ಗಳನ್ನು ತೊಳಕೊಂಡೆನು; ನಾನು ಅವುಗಳನ್ನು ಮೈಲಿಗೆ ಮಾಡುವದು ಹೇಗೆ?
4ನನ್ನ ಪ್ರಿಯನು ಬಾಗಲ ಸಂದಿನಲ್ಲಿ ತನ್ನ ಕೈಹಾಕಿದನು; ನನ್ನ ಕರುಳುಗಳು ಅವನಿಗಾಗಿ ಮರುಗಿದವು.
5ನಾನು ನನ್ನ ಪ್ರಿಯನಿಗೆ ತೆರೆಯಲು ಎದ್ದಾಗ ಬೀಗದ ಹಿಡಿಗಳ ಮೇಲೆ ನನ್ನ ಕೈಗಳಿಂದ ರಕ್ತಬೋಳವೂ ನನ್ನ ಬೆರಳುಗಳಿಂದ ಸೋರುವ ಬೋಳವೂ ಸುರಿಯಿತು.
6ನಾನು ನನ್ನ ಪ್ರಿಯನಿಗೆ ಕದತೆರೆದೆನು; ಆದರೆ ನನ್ನ ಪ್ರಿಯನು ಹಿಂದಿರುಗಿ ಹೋಗಿದ್ದನು. ಅವನು ಮಾತನಾಡಿದಾಗ ನನ್ನ ಪ್ರಾಣವು ಸತ್ತಂತಿತ್ತು; ಅವನನ್ನು ಹುಡುಕಿದೆನು; ಸಿಕ್ಕದೆ ಹೋದನು; ಅವನನ್ನು ಕರೆದೆನು; ಪ್ರತ್ಯುತ್ತರ ಕೊಡದೆ ಹೋದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ