ಆದಿಕಾಂಡ 2:17

ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 2

15ಆಗ ಕರ್ತನಾದ ದೇವರು ಮನುಷ್ಯನನ್ನು ಕರಕೊಂಡು ಹೋಗಿ ಏದೆನ್‌ ತೋಟ ವನ್ನು ವ್ಯವಸಾಯ ಮಾಡುವದಕ್ಕೂ ಕಾಯುವದಕ್ಕೂ ಅದರಲ್ಲಿ ಇಟ್ಟನು.

16ದೇವರಾದ ಕರ್ತನು ಮನುಷ್ಯ ನಿಗೆ ಆಜ್ಞಾಪಿಸಿದ್ದೇನಂದರೆ--ನೀನು ತೋಟದ ಎಲ್ಲಾ ಮರಗಳ ಫಲವನ್ನು ಯಥೇಚ್ಛವಾಗಿ ತಿನ್ನಬಹುದು;

17ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು.

18ಕರ್ತನಾದ ದೇವರು--ಮನುಷ್ಯನು ಒಂಟಿಯಾ ಗಿರುವದು ಒಳ್ಳೆಯದಲ್ಲ; ಅವನಿಗೆ ತಕ್ಕ ಸಹಕಾರಿಯನ್ನು ಮಾಡುವೆನು ಅಂದನು.

19ಇದಲ್ಲದೆ ಕರ್ತನಾದ ದೇವರು ಅಡವಿಯ ಎಲ್ಲಾ ಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿ ಅವುಗಳಿಗೆ ಆದಾಮನು ಏನು ಹೆಸರಿಡುವನೋ ಎಂದು ನೋಡು ವದಕ್ಕೆ ಅವನ ಬಳಿಗೆ ಬರಮಾಡಿದನು. ಆದಾಮನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು.

ಆದಿಕಾಂಡ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी