ಆಗ ಮೋಶೆಯು ಇವರಿಗೆ--ನೀವು ಈ ಕಾರ್ಯ ವನ್ನು ಮಾಡಿದರೆ ನೀವು ಕರ್ತನ ಮುಂದೆ ಯುದ್ದಕ್ಕೆ ಸಿದ್ಧವಾಗಿದ್ದರೆ
18ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯವನ್ನು ಹೊಂದಿಕೊಳ್ಳುವ ವರೆಗೆ ನಾವು ನಮ್ಮ ಮನೆಗಳಿಗೆ ತಿರುಗುವದಿಲ್ಲ.
19ನಾವು ಯೊರ್ದನ್ ನದಿಯ ಆಚೆಯಲ್ಲಿ ಅವರ ಸಂಗಡ ಸ್ವಾಸ್ತ್ಯವನ್ನು ತಕ್ಕೊಳ್ಳುವದಿಲ್ಲ. ಯಾಕಂದರೆ ನಮ್ಮ ಸ್ವಾಸ್ತ್ಯವು ನಮಗೆ ಯೊರ್ದನ್ ನದಿಯ ಈಚೆಯಲ್ಲಿ ಮೂಡಣ ಕಡೆಯಲ್ಲಿ ಬಂತು ಎಂದು ಹೇಳಿದರು.
20ಆಗ ಮೋಶೆಯು ಇವರಿಗೆ--ನೀವು ಈ ಕಾರ್ಯ ವನ್ನು ಮಾಡಿದರೆ ನೀವು ಕರ್ತನ ಮುಂದೆ ಯುದ್ದಕ್ಕೆ ಸಿದ್ಧವಾಗಿದ್ದರೆ
21ನಿಮ್ಮಲ್ಲಿ ಯುದ್ಧಕ್ಕೆ ಸಿದ್ಧವಾದವರೆಲ್ಲರು ಕರ್ತನು ತನ್ನ ಶತ್ರುಗಳನ್ನು ತನ್ನ ಸನ್ನಿಧಿಯಿಂದ ಹೊರಡಿಸುವ ವರೆಗೆ ಕರ್ತನ ಮುಂದೆ ಯೊರ್ದನ್ ನದಿಯನ್ನು ದಾಟಿದರೆ
22ದೇಶವು ಕರ್ತನ ಮುಂದೆ ವಶವಾದ ತರುವಾಯ ನೀವು ಕರ್ತನಿಂದಲೂ ಇಸ್ರಾ ಯೇಲ್ಯರಿಂದಲೂ ನಿರಪರಾಧಿಗಳಾಗಿದ್ದು ತಿರುಗಿಕೊಳ್ಳ ಬಹುದು; ಈ ದೇಶವು ಕರ್ತನ ಮುಂದೆ ನಿಮ್ಮ ಸ್ವಾಸ್ತ್ಯಕ್ಕಾಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ