ಅರಣ್ಯಕಾಂಡ 22:35

ಆದರೆ ಕರ್ತನ ದೂತನು ಬಿಳಾಮನಿಗೆ--ಈ ಮನುಷ್ಯರ ಸಂಗಡ ಹೋಗು; ಹೋದರೂ ನಾನು ನಿನಗೆ ಹೇಳುವದನ್ನೇ ಹೇಳಬೇಕು ಅಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 22

33ಆ ಕತ್ತೆಯು ನನ್ನನ್ನು ನೋಡಿ ನನ್ನ ಮುಂದೆ ಈಗ ಮೂರು ಸಾರಿ ವಾರೆಯಾಗಿ ಹೋಯಿತು; ಅದು ನನ್ನ ಮುಂದೆ ವಾರೆಯಾಗಿ ಹೋಗದಿದ್ದರೆ ನಿಶ್ಚಯವಾಗಿ ಆಗಲೇ ನಿನ್ನನ್ನು ಕೊಂದು ಹಾಕಿ ಅದನ್ನು ಪ್ರಾಣದಿಂದ ಉಳಿಸುತ್ತಿದ್ದೆನು ಅಂದನು.

34ಆಗ ಬಿಳಾಮನು ಕರ್ತನ ದೂತನಿಗೆ ಹೇಳಿದ್ದುನಾನು ಪಾಪಮಾಡಿದ್ದೇನೆ; ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ; ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ ಅಂದನು.

35ಆದರೆ ಕರ್ತನ ದೂತನು ಬಿಳಾಮನಿಗೆ--ಈ ಮನುಷ್ಯರ ಸಂಗಡ ಹೋಗು; ಹೋದರೂ ನಾನು ನಿನಗೆ ಹೇಳುವದನ್ನೇ ಹೇಳಬೇಕು ಅಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.

36ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ ಅವನು ಕಡೇ ಮೇರೆಯಲ್ಲಿರುವ ಅರ್ನೋನಿನ ಆಚೆ ಯಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಅವನಿಗೆದುರಾಗಿ ಹೊರಟನು.

37ಬಾಲಾಕನು ಬಿಳಾಮನಿಗೆ ಹೇಳಿದ್ದೇ ನಂದರೆ--ನಾನು ನಿನ್ನನ್ನು ತೀವ್ರವಾಗಿ ಕರೇ ಕಳುಹಿಸ ಲಿಲ್ಲವೋ? ನೀನು ನನ್ನ ಬಳಿಗೆ ಯಾಕೆ ಬರಲಿಲ್ಲ? ನಾನು ನಿನ್ನನ್ನು ಘನಪಡಿಸಲು ನಿಶ್ಚಯವಾಗಿ ಸಾಮರ್ಥ್ಯ ವುಳ್ಳವನಲ್ಲವೋ?

ಅರಣ್ಯಕಾಂಡ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी