ಕೀರ್ತನೆಗಳು 142:4

ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 142

2ಆತನ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ಆತನ ಮುಂದೆ ತಿಳಿಸಿದ್ದೇನೆ.

3ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ.

4ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ.

5ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.

6ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.

ಕೀರ್ತನೆಗಳು 142 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी