ಯೋನ 1:12

ಅವನು ಅವ ರಿಗೆ--ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ನಿಮಗೆ ಶಾಂತವಾಗುವದು; ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ ನಿಮ್ಮ ಮೇಲೆ ಬಂತೆಂದು ಬಲ್ಲೆನು ಅಂದನು.

ಸಂದರ್ಭದೊಂದಿಗೆ ಓದಿ · ಯೋನ 1

10ಆಗ ಆ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಆ ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು.

11ಆಗ ಅವರು ಅವನಿಗೆ--ಸಮುದ್ರವು ನಮಗೆ ಶಾಂತವಾಗುವ ಹಾಗೆ ನಿನಗೆ ಏನು ಮಾಡಬೇಕು? ಯಾಕಂದರೆ ಸಮುದ್ರವು ಹೆಚ್ಚಾಗಿ ಉಬ್ಬುತ್ತಾ ಬರುತ್ತಿದೆ ಅಂದರು.

12ಅವನು ಅವ ರಿಗೆ--ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ನಿಮಗೆ ಶಾಂತವಾಗುವದು; ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ ನಿಮ್ಮ ಮೇಲೆ ಬಂತೆಂದು ಬಲ್ಲೆನು ಅಂದನು.

13ಆದರೂ ಆ ಮನುಷ್ಯರು ದಡಕ್ಕೆ ತಿರುಗಿಕೊಳ್ಳುವ ಹಾಗೆ ಬಲವಾಗಿ ಹುಟ್ಟು ಹಾಕಿದರು; ಆದರೆ ಅವರಿಂದಾಗದೆ ಹೋಯಿತು. ಸಮುದ್ರವು ಅವರಿಗೆ ಎದುರಾಗಿ ಹೆಚ್ಚೆಚ್ಚಾಗಿ ಉಬ್ಬುತ್ತಾ ಬಂತು.

14ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು.

ಯೋನ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी