ಅರಸನು ಹೇಳಿಕಳುಹಿಸಿದ್ದರಿಂದ ಯೆಹೂದದ, ಯೆರೂಸಲೇಮಿನ, ಹಿರಿಯರೆಲ್ಲ ರನ್ನು ಅವನ ಬಳಿಗೆ ಕೂಡಿಸಿದರು.
1ಅರಸನು ಹೇಳಿಕಳುಹಿಸಿದ್ದರಿಂದ ಯೆಹೂದದ, ಯೆರೂಸಲೇಮಿನ, ಹಿರಿಯರೆಲ್ಲ ರನ್ನು ಅವನ ಬಳಿಗೆ ಕೂಡಿಸಿದರು.
2ಆಗ ಅರಸನೂ ಅವನ ಸಂಗಡ ಯೆಹೂದದ ಜನರೆಲ್ಲರೂ ಯೆರೂ ಸಲೇಮಿನ ನಿವಾಸಿಗಳೆಲ್ಲರೂ ಯಾಜಕರೂ ಪ್ರವಾದಿ ಗಳೂ ಹಿರಿಕಿರಿಯರಾದ ಎಲ್ಲಾ ಜನರೂ ಕರ್ತನ ಆಲಯಕ್ಕೆ ಹೋದರು. ಅವರು ಕೇಳುವ ಹಾಗೆ ಕರ್ತನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಪುಸ್ತಕದ ಮಾತುಗಳನೆಲ್ಲಾ ಅವನು ಓದಿದನು.
3ಅರಸನು ಸ್ತಂಭದ ಬಳಿಯಲ್ಲಿ ನಿಂತು ಕರ್ತನನ್ನು ಹಿಂಬಾಲಿಸು ವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆ ಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿ ರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವ ದಕ್ಕೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿ ದನು; ಜನರೆಲ್ಲರೂ ಒಡಂಬಡಿಕೆಗೆ ಒಪ್ಪಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ