ರೂತಳು 4:8

ಹಾಗೆಯೇ ಆ ಬಂಧುವು ಬೋವಜನಿಗೆ--ನೀನು ನಿನಗೋಸ್ಕರ ಅದನ್ನು ಕೊಂಡುಕೋ ಎಂದು ತನ್ನ ಕೆರವನ್ನು ತೆಗೆದು ಹಾಕಿದನು.

ಸಂದರ್ಭದೊಂದಿಗೆ ಓದಿ · ರೂತಳು 4

6ಅದಕ್ಕೆ ಬಂಧುವು ನಾನು ನನ್ನ ಬಾಧ್ಯತೆಯನ್ನು ಕೆಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು; ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ;

7ನಾನು ಬಿಡಿಸಿಕೊಳ್ಳಲಾರೆನು ಅಂದನು. ಬಿಡಿಸಿಕೊಳ್ಳು ವದರಲ್ಲಿಯೂ ಬದಲು ಮಾಡುವದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಪೂರ್ವದವಾಡಿಕೆ ಏನಂದರೆ, ಒಬ್ಬನು ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುವನು. ಇದು ಇಸ್ರಾಯೇಲಿನಲ್ಲಿ ಸಾಕ್ಷಿಗಾದದ್ದು.

8ಹಾಗೆಯೇ ಆ ಬಂಧುವು ಬೋವಜನಿಗೆ--ನೀನು ನಿನಗೋಸ್ಕರ ಅದನ್ನು ಕೊಂಡುಕೋ ಎಂದು ತನ್ನ ಕೆರವನ್ನು ತೆಗೆದು ಹಾಕಿದನು.

9ಆಗ ಬೋವಜನು ಹಿರಿಯರಿಗೂ ಸಮಸ್ತ ಜನ ರಿಗೂ ನಾನು ಎಲೀಮೆಲೆಕನಿಗೆ ಇದ್ದ ಎಲ್ಲವನ್ನೂ ಕಿಲ್ಯೋನನಿಗೂ ಮಹ್ಲೋನನಿಗೂ ಇದ್ದ ಎಲ್ಲವನ್ನೂ ನೊವೊಮಿಯ ಕೈಯಿಂದ ಕೊಂಡುಕೊಂಡೆನು ಎಂಬ ದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು.

10ಇದಲ್ಲದೆ ಸತ್ತವನ ಸಹೋದರರಿಂದಲೂ ಅವನ ಸ್ಥಳದ ಬಾಗಲದಿಂದಲೂ ಅವನ ಹೆಸರು ಕಡಿದು ಹಾಕಲ್ಪಡದ ಹಾಗೆ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಕೊಂಡುಕೊಂಡೆನು.

ರೂತಳು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी