ನಿಮ್ಮ ಸಾಮಾನುಗಳಿಗಾಗಿ ಚಿಂತಿಸಬೇಡಿರಿ; ಐಗುಪ್ತದೇಶದಲ್ಲಿರುವ ಉತ್ತಮ ವಾದದ್ದೆಲ್ಲಾ ನಿಮ್ಮದೇ ಎಂದು ಹೇಳು ಅಂದನು.
18ನಿಮ್ಮ ತಂದೆಯನ್ನೂ ನಿಮ್ಮ ನಿಮ್ಮ ಮನೆಯವರನ್ನೂ ಕರಕೊಂಡು ನನ್ನ ಬಳಿಗೆ ಬನ್ನಿರಿ. ಐಗುಪ್ತದೇಶದ ಉತ್ತಮವಾದದ್ದನ್ನು ನಾನು ನಿಮಗೆ ಕೊಡುವೆನು. ಈ ದೇಶದ ಸಾರವನ್ನು ಊಟಮಾಡುವಿರಿ.
19ಇದನ್ನು ಮಾಡುವಂತೆ ನಿಮಗೆ ಅಪ್ಪಣೆಯಾಯಿತು; ಐಗುಪ್ತದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ ಹೆಂಡತಿಯರಿಗಾಗಿಯೂ ಬಂಡಿ ಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ.
20ನಿಮ್ಮ ಸಾಮಾನುಗಳಿಗಾಗಿ ಚಿಂತಿಸಬೇಡಿರಿ; ಐಗುಪ್ತದೇಶದಲ್ಲಿರುವ ಉತ್ತಮ ವಾದದ್ದೆಲ್ಲಾ ನಿಮ್ಮದೇ ಎಂದು ಹೇಳು ಅಂದನು.
21ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೋಸ್ಕರ ಆಹಾರ ವನ್ನೂ ಕೊಟ್ಟನು.
22ಅವರೆಲ್ಲರಿಗೆ ಒಂದೊಂದು ಜೊತೆ ವಸ್ತ್ರಗಳನ್ನೂ ಬೆನ್ಯಾವಿಾನನಿಗೆ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ ಐದು ಜೊತೆ ವಸ್ತ್ರಗಳನ್ನೂ ಕೊಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ