ಆದಿಕಾಂಡ 3:16

ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 3

14ಆಗ ಕರ್ತನಾದ ದೇವರು ಸರ್ಪಕ್ಕೆ--ನೀನು ಇದನ್ನು ಮಾಡಿದ ಕಾರಣ ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಅಡವಿಯ ಮೃಗಗಳ ಲ್ಲಿಯೂ ಶಪಿಸಲ್ಪಟ್ಟು ಜೀವದಿಂದಿರುವ ದಿವಸಗಳಲ್ಲೆಲ್ಲಾ ಹೊಟ್ಟೆಯಿಂದ ಹರಿದಾಡಿ ಮಣ್ಣನ್ನು ತಿನ್ನುವಿ.

15ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.

16ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು.

17ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ.

18ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ.

ಆದಿಕಾಂಡ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी