೨ ಸಮುವೇಲನು 1:3

ದಾವೀದನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಅದಕ್ಕವನು--ಇಸ್ರಾಯೇ ಲಿನ ದಂಡಿನಿಂದ ತಪ್ಪಿಸಿಕೊಂಡು ಬಂದೆನು ಅಂದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 1

1ಸೌಲನು ಸತ್ತ ತರುವಾಯ ದಾವೀದನು ಅಮಾಲೇಕ್ಯರನ್ನು ಸಂಹರಿಸಿ ಚಿಕ್ಲಗಿಗೆ ತಿರಿಗಿ ಬಂದು ಎರಡು ದಿವಸ ಅಲ್ಲಿ ಇದ್ದ ತರುವಾಯ ಏನಾಯಿತಂದರೆ

2ಇಗೋ, ಮೂರನೆಯ ದಿನದಲ್ಲಿ ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದ ಒಬ್ಬ ಮನುಷ್ಯನು ಸೌಲನ ಬಳಿಯಿಂದಲೂ ಪಾಳೆಯಿಂದಲೂ ಹೊರಟು ದಾವೀ ದನ ಬಳಿಗೆ ಬಂದು ನೆಲದ ಮೇಲೆ ಬಿದ್ದು ಅವ ನಿಗೆ ವಂದಿಸಿದನು.

3ದಾವೀದನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಅದಕ್ಕವನು--ಇಸ್ರಾಯೇ ಲಿನ ದಂಡಿನಿಂದ ತಪ್ಪಿಸಿಕೊಂಡು ಬಂದೆನು ಅಂದನು.

4ದಾವೀದನು ಅವನಿಗೆ--ನಡೆದ ವರ್ತಮಾನವೇನು? ನೀನು ನನಗೆ ತಿಳಿಸು ಅಂದನು. ಅವನು--ಜನರು ಯುದ್ಧದಿಂದ ಓಡಿಹೋದರು; ಜನರಲ್ಲಿ ಅನೇಕರು ಸತ್ತುಬಿದ್ದರು; ಸೌಲನೂ ಅವನ ಮಗನಾದ ಯೋನಾ ತಾನನೂ ಸತ್ತರು ಅಂದನು.

5ದಾವೀದನು ತನಗೆ ವರ್ತಮಾನ ಹೇಳಿದ ಯೌವನಸ್ಥನಿಗೆ--ಸೌಲನೂ ಅವನ ಮಗನಾದ ಯೋನಾತಾನನೂ ಸತ್ತರೆಂದು ನಿನಗೆ ಹೇಗೆ ತಿಳಿಯಿತು ಅಂದನು.

೨ ಸಮುವೇಲನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी