ಯೆಶಾಯ 59:17

ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.

ಸಂದರ್ಭದೊಂದಿಗೆ ಓದಿ · ಯೆಶಾಯ 59

15ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ.

16ಯಾವ ಮನುಷ್ಯನೂ ಇಲ್ಲದೆ ಇರುವದನ್ನು ಆತನು ನೋಡಿ, ಮಧ್ಯಸ್ಥಗಾರನು ಇಲ್ಲವೆಂದು ಆಶ್ಚರ್ಯಪಟ್ಟನು; ಆಗ ಆತನ ಬಾಹು ತನಗೋಸ್ಕರ ರಕ್ಷಣೆಯನ್ನೂ ನೀತಿಯನ್ನೂ ತಂದಿತು. ಅದೇ ಆತನನ್ನು ಉದ್ಧಾರಮಾಡಿತು.

17ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.

18ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು; ತನ್ನ ವೈರಿ ಗಳಿಗೆ ಕ್ರೋಧವನ್ನೂ ತನ್ನ ಶತ್ರುಗಳಿಗೂ ದ್ವೀಪಗ ಳಿಗೂ ಪ್ರತಿಫಲವನ್ನು ಸಲ್ಲಿಸುವನು.

19ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.

ಯೆಶಾಯ 59 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी