೨ ಪೂರ್ವಕಾಲವೃತ್ತಾಂತ 14:13

ಆಗ ಆಸನೂ ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನ ವರೆಗೂ ಹಿಂದಟ್ಟಿದರು. ಕೂಷಿಯರು ತಮಗೆ ತ್ರಾಣವಿಲ್ಲದ ಹಾಗೆ ಸೋತುಹೋದರು. ಅವರು ಕರ್ತನ ಮುಂದೆಯೂ ಆತನ ಸೈನ್ಯದ ಮುಂದೆಯೂ ನಾಶ ವಾದರು. ಯೆಹೂದದವರು ಬಹು ಕೊಳ್ಳೆಯನ್ನು ಒಯ್ದರು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 14

11ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.

12ಆಗ ಕರ್ತನು ಕೂಷಿಯರನ್ನು ಆಸನ ಮುಂದೆಯೂ ಯೆಹೂ ದದವರ ಮುಂದೆಯೂ ಹೊಡೆದನು. ಆದದರಿಂದ ಕೂಷಿಯರು ಓಡಿಹೋದರು.

13ಆಗ ಆಸನೂ ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನ ವರೆಗೂ ಹಿಂದಟ್ಟಿದರು. ಕೂಷಿಯರು ತಮಗೆ ತ್ರಾಣವಿಲ್ಲದ ಹಾಗೆ ಸೋತುಹೋದರು. ಅವರು ಕರ್ತನ ಮುಂದೆಯೂ ಆತನ ಸೈನ್ಯದ ಮುಂದೆಯೂ ನಾಶ ವಾದರು. ಯೆಹೂದದವರು ಬಹು ಕೊಳ್ಳೆಯನ್ನು ಒಯ್ದರು.

14ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ಹೊಡೆದರು. ಕರ್ತನ ಭಯವು ಅವರ ಮೇಲೆ ಬಂತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದದ್ದರಿಂದ ಇವುಗಳನ್ನೆಲ್ಲಾ ಕೊಳ್ಳೆಮಾಡಿದರು.

15ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು.

೨ ಪೂರ್ವಕಾಲವೃತ್ತಾಂತ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी