ಯೋಹಾನನು 8:57

ಆಗ ಯೆಹೂದ್ಯರು ಆತ ನಿಗೆ--ನಿನಗೆ ಇನ್ನೂ ಐವತ್ತು ವರುಷವಾಗಿಲ್ಲ; ನೀನು ಅಬ್ರಹಾಮನನ್ನು ನೋಡಿದ್ದೀಯೋ ಅಂದರು.

ಸಂದರ್ಭದೊಂದಿಗೆ ಓದಿ · ಯೋಹಾನನು 8

55ಆದಾಗ್ಯೂ ನೀವು ಆತನನ್ನು ಅರಿತುಕೊಂಡಿಲ್ಲ; ಆದರೆ ನಾನು ಆತನನ್ನು ಅರಿತಿದ್ದೇನೆ. ನಾನು ಆತನನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗಿ ರುವೆನು; ಆದರೆ ನಾನು ಆತನನ್ನು ಅರಿತಿದ್ದೇನೆ; ಆತನ ಮಾತನ್ನು ಕೈಕೊಂಡಿದ್ದೇನೆ.

56ನಿಮ್ಮ ತಂದೆಯಾದ ಅಬ್ರಹಾಮನು ನನ್ನ ದಿನವನ್ನು ನೋಡಲು ಸಂತೋಷಿ ಸಿದನು, ಅದನ್ನು ನೋಡಿ ಅವನು ಉಲ್ಲಾಸಗೊಂಡನು ಎಂದು ಹೇಳಿದನು.

57ಆಗ ಯೆಹೂದ್ಯರು ಆತ ನಿಗೆ--ನಿನಗೆ ಇನ್ನೂ ಐವತ್ತು ವರುಷವಾಗಿಲ್ಲ; ನೀನು ಅಬ್ರಹಾಮನನ್ನು ನೋಡಿದ್ದೀಯೋ ಅಂದರು.

58ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.

59ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.

ಯೋಹಾನನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी