ಅವರು--ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ; ನೀನು ಯಾವನ ಕೈಯಿಂದ ಏನಾದರೂ ತಕ್ಕೊಳ್ಳಲಿಲ್ಲ ಅಂದರು.
2ಇಗೋ, ಆ ಅರಸನು ಇನ್ನು ಮುಂದೆ ನಿಮ್ಮನ್ನು ನಡಿಸುತ್ತಾನೆ. ಈಗ ನಾನು ತಲೆನರೆತ ಮುದುಕನಾಗಿದ್ದೇನೆ. ಇಗೋ, ನನ್ನ ಕುಮಾರರು ನಿಮ್ಮ ಸಂಗಡ ಇದ್ದಾರೆ. ನಾನು ನನ್ನ ಬಾಲ್ಯದಿಂದ ಈ ದಿನದ ವರೆಗೂ ನಿಮ್ಮ ಮುಂದೆ ನಡಕೊಂಡಿದ್ದೇನೆ.
3ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.
4ಅವರು--ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ; ನೀನು ಯಾವನ ಕೈಯಿಂದ ಏನಾದರೂ ತಕ್ಕೊಳ್ಳಲಿಲ್ಲ ಅಂದರು.
5ಅವನು ಅವರಿಗೆ--ನೀವು ನನ್ನಲ್ಲಿ ಏನಾದರೂ ಕಂಡು ಹಿಡಿಯಲಿಲ್ಲವೆಂಬದಕ್ಕೆ ಕರ್ತನೇ ನಿಮಗೆ ಸಾಕ್ಷಿಯಾಗಿ ದ್ದಾನೆ; ಆತನ ಅಭಿಷಿಕ್ತನು ಈಹೊತ್ತು ಸಾಕ್ಷಿಯಾಗಿದ್ದಾನೆ ಅಂದನು. ಅದಕ್ಕವರು--ಆತನು ಸಾಕ್ಷಿಯಾಗಿದ್ದಾನೆ ಅಂದರು.
6ಆಗ ಸಮುವೇಲನು ಜನರಿಗೆ--ಮೋಶೆ ಯನ್ನೂ ಆರೋನನನ್ನೂ ಮುಂದಕ್ಕೆ ತಂದು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನೇ ಇದಕ್ಕೆ ಸಾಕ್ಷಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ