ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವದರಲ್ಲಿ ರಕ್ತದ ಮಟ್ಟಿಗೂ ಇನ್ನೂ ಅದನ್ನು ಎದುರಿಸಲಿಲ್ಲ.
2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
3ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
4ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವದರಲ್ಲಿ ರಕ್ತದ ಮಟ್ಟಿಗೂ ಇನ್ನೂ ಅದನ್ನು ಎದುರಿಸಲಿಲ್ಲ.
5ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
6ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ