ಮತ್ತಾಯನು 12:20

ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.

ಸಂದರ್ಭದೊಂದಿಗೆ ಓದಿ · ಮತ್ತಾಯನು 12

18ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು.

19ಆತನು ಜಗಳವಾಡುವದಿಲ್ಲ, ಕೂಗಾಡು ವದೂ ಇಲ್ಲ; ಇಲ್ಲವೆ ಯಾವ ಮನುಷ್ಯನು ಬೀದಿಗಳಲ್ಲಿ ಆತನ ಸ್ವರವನ್ನು ಕೇಳಿಸಿಕೊಳ್ಳುವದೂ ಇಲ್ಲ.

20ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.

21ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.

22ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.

ಮತ್ತಾಯನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी