ಮತ್ತಾಯನು 2:11

ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.

ಸಂದರ್ಭದೊಂದಿಗೆ ಓದಿ · ಮತ್ತಾಯನು 2

9ಅವರು ಅರಸನ ಮಾತನ್ನು ಕೇಳಿ ಹೊರಟಾಗ ಇಗೋ, ಮೂಡಲದಲ್ಲಿ ಅವರು ಕಂಡ ನಕ್ಷತ್ರವು ಶಿಶುವು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದೆ ಹೋಯಿತು.

10ಅವರು ಆ ನಕ್ಷತ್ರವನ್ನು ಕಂಡು ಅತ್ಯಧಿಕವಾದ ಆನಂದದಿಂದ ಸಂತೋಷಪಟ್ಟರು.

11ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.

12ಆಮೇಲೆ ಅವರು ಹೆರೋದನ ಬಳಿಗೆ ಹಿಂತಿರುಗಬಾರದೆಂದು ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟು ಬೇರೊಂದು ದಾರಿಯಿಂದ ತಮ್ಮ ಸ್ವದೇಶಕ್ಕೆ ಹೊರಟುಹೋದರು.

13ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು

ಮತ್ತಾಯನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी