ರೋಮಾಪುರದವರಿಗೆ 2:3

ಅಂಥವು ಗಳನ್ನು ಮಾಡುವವರಿಗೆ ತೀರ್ಪು ಮಾಡುವ ಓ ಮನುಷ್ಯನೇ, ಅವುಗಳನ್ನೇ ಮಾಡುವವನಾದ ನೀನು ದೇವರ ನ್ಯಾಯತೀರ್ಪಿನಿಂದ ತಪ್ಪಿಸಿಕೊಳ್ಳುತ್ತೇನೆಂದು ಯೋಚಿಸುತ್ತೀಯೋ?

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 2

1ಆದದರಿಂದ ಓ ಮನುಷ್ಯನೇ, ತೀರ್ಪು ಮಾಡುವ ನೀನು ಯಾವನಾಗಿದ್ದರೂ ನೆವವಿಲ್ಲದವನಾಗಿದ್ದೀ; ಹೇಗೆಂದರೆ ಬೇರೊಬ್ಬನಿಗೆ ತೀರ್ಪು ಮಾಡುವ ನೀನು ಅಂಥವುಗಳನ್ನೇ ಮಾಡುವವ ನಾದ್ದರಿಂದ ನಿನ್ನಷ್ಟಕ್ಕೆ ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು.

2ಆದರೆ ಅಂಥವುಗಳನ್ನು ಮಾಡುವವರ ಮೇಲೆ ಸತ್ಯಕ್ಕನುಸಾರವಾಗಿ ದೇವರ ನ್ಯಾಯತೀರ್ಪು ಇದೆಯೆಂದು ನಮಗೆ ನಿಶ್ಚಯವುಂಟು.

3ಅಂಥವು ಗಳನ್ನು ಮಾಡುವವರಿಗೆ ತೀರ್ಪು ಮಾಡುವ ಓ ಮನುಷ್ಯನೇ, ಅವುಗಳನ್ನೇ ಮಾಡುವವನಾದ ನೀನು ದೇವರ ನ್ಯಾಯತೀರ್ಪಿನಿಂದ ತಪ್ಪಿಸಿಕೊಳ್ಳುತ್ತೇನೆಂದು ಯೋಚಿಸುತ್ತೀಯೋ?

4ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?

5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.

ರೋಮಾಪುರದವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी